ಕರ್ನಾಟಕ

ಕೆಎಸ್​ಆರ್​ಟಿಸಿಯನ್ನ ಅರಸಿ ಬಂದ ರಾಷ್ಟ್ರೀಯ ಹಾಗೂ ವಿಶ್ಚ ಮಟ್ಟದ ಪ್ರಶಸ್ತಿಗಳು

ದೇಶದೆಲ್ಲೆಡೆ ಮನೆಮಾತಾಗಿರುವ ಕೆಎಸ್‌ಆರ್‌ಟಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಡಿಜಿಟಲ್ ತಂತ್ರಜ್ಞಾನ ಉತ್ತಮ ಸೇವೆ ನೀಡುತ್ತಾ ಬಂದಿದೆ.

ಬೆಂಗಳೂರು : ಕರ್ನಾಟಕದ ಹೆಮ್ಮೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC)ಗೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ದೇಶದೆಲ್ಲೆಡೆ ಮನೆಮಾತಾಗಿರುವ ಕೆಎಸ್‌ಆರ್‌ಟಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಡಿಜಿಟಲ್ ತಂತ್ರಜ್ಞಾನ ಉತ್ತಮ ಸೇವೆ ನೀಡುತ್ತಾ ಬಂದಿದೆ. ಇದರಿಂದಾಗಿ ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಬಂದಿದೆ. ಈಗ ಕೆಎಸ್‌ಆರ್‌ಟಿಸಿ ಮತ್ತೊಂದು ಗರಿ ಸಿಕ್ಕಿದ್ದು, ಇದೀಗ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. 

ಪ್ರಶಸ್ತಿಗಳ ವಿವರ..?
- ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ
- ಕನಸುಗಳ ಕಂಪನಿಗಳು ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ
- ವರ್ಷದ ವ್ಯವಹಾರ ನಾಯಕ ಪ್ರಶಸ್ತಿ ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ
- ವಿಶ್ವ ಆರೈಕೆ ಪ್ರಶಸ್ತಿ ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ
- ವಿಶ್ವ ನಾವಿನ್ಯತೆ ಪ್ರಶಸ್ತಿ ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ ನಾವೀನ್ಯತೆ
- ಜಾಗತಿಕ ತಯಾರಿಕಾ ನಾಯಕರ ಪ್ರಶಸ್ತಿ ಸುಸ್ಥಿರತೆಯ ಗೌರವ
- ಡಿಜಿಟಲ್ ತಂತ್ರಜ್ಞಾನ ಪ್ರಶಸ್ತಿ
- ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 17, 18 ಮತ್ತು 21 ರಂದು ಮುಂಬೈನಲ್ಲಿ ನಡೆಯಲಿದೆ.