ಕರ್ನಾಟಕ
ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಬಂದೇ ಬರುತ್ತದೆ - ಹೆಚ್‌ಡಿಕೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.. ಮುಂದೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದಿದ್ದಾರೆ..
ರಾಜ್ಯ ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.. ಮುಂದೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದಿದ್ದಾರೆ.. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ನಾವು ಮಾಡಿ ಮುಗಿಸುತ್ತೇವೆ ಎಂದಿದ್ದಾರೆ.. ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟಿರುವ ನರೇಂದ್ರಮೋದಿ ಅವರು ತಮ್ಮ ಸಂಪುಟದಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕನಸಿನ ವಿಕಸಿತ ಭಾರತ್ ಸೇರಿದಂತೆ ಅನೇಕ ಯೋಜನೆಗಳನ್ನು ಸಾಕಾರಗೊಳಿಸಬೇಕು. ಆ ನಿಟ್ಟಿನಲ್ಲಿ ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ..