ಕರ್ನಾಟಕ

ಟಿ.ನರಸೀಪುರದಲ್ಲಿ ಕುಂಭಮೇಳ...ಭರದಿಂದ ಸಾಗಿದ ಸಿದ್ಧತೆ..!

ಫೆಬ್ರವರಿ 10ರಿಂದ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಕುಂಭಮೇಳ ಹಿನ್ನೆಲೆ, ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.

ಫೆಬ್ರವರಿ 10ರಿಂದ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಕುಂಭಮೇಳ ಹಿನ್ನೆಲೆ, ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಧಾರ್ಮಿಕ ಕಾರ್ಯಕ್ರಮಗಳಿಗಾಗಿ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಸ್ವಚ್ಛತೆ, ಲೈಟಿಂಗ್ಸ್‌ ಅಳವಡಿಕೆ ಕೂಡ ಮಾಡಲಾಗುತ್ತಿದೆ. ಜೊತೆಗೆ ನದಿಯೊಳಗೆ ಮರದ ಬೊಂಬುಗಳಿಂದ ತಡೆ ಬೇಲಿ ನಿರ್ಮಾಣ ಮಾಡಲಾಗುತ್ತಿದೆ. 

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಅಲ್ಲದೇ ನದಿ ಪಾತ್ರದ ಹಲವೆಡೆ ಮುಳುಗು ತಜ್ಞರನ್ನು ನಿಯೋಜನೆ ಮಾಡಲಾಗಿದೆ. ಪುಣ್ಯಸ್ನಾನಕ್ಕೆ ಆಗಮಿಸುವ ಭಕ್ತರಿಗೆ ಬಟ್ಟೆ ಬದಲಾಯಿಸಲು ತಾತ್ಕಾಲಿಕ ಕೊಠಡಿಗಳ ವ್ಯವಸ್ಥೆ ಕೂಡ ಮಾಡಲಾಗಿದೆ. ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳನ್ನು ಕೂಡ ವ್ಯವಸ್ಥೆ ಮಾಡಲಾಗಿದ್ದು,ನೂಕು ನುಗ್ಗುಲು ತಡೆಯಲು ಹಲವೆಡೆ ಬ್ಯಾರಿಕೆಡ್ ಅಳವಡಿಸಿ, ಪಟ್ಟಣದ ಹಲವೆಡೆ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ಸ್ಥಳ ನಿಗದಿ ಮಾಡಲಾಗಿದೆ. ಅಗಸ್ತೇಶ್ವರ ದೇವಾಲಯ, ಗುಂಜಾನರಸಿಂಹಸ್ವಾಮಿ, ಭಿಕ್ಷೆಶ್ವರ ದೇವಾಲಯಗಳಿಗೆ ತೆರಳಿ ಭಕ್ತರು ಪೂಜೆ ಸಲ್ಲಿಸಲಿದ್ದು, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.