ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳದ ಸಂಭ್ರಮ ಜೋರಾಗಿದ್ದು, 13ನೇ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ ದೊರಕಿದೆ. ಧ್ವಜಾರೋಹಣದ ಮೂಲಕ ಕುಂಭಮೇಳಕ್ಕೆ ಧಾರ್ಮಿಕ ಮುಖಂಡರು ಚಾಲನೆ ನೀಡಿದ್ದಾರೆ. ತ್ರಿವೇಣಿ ಸಂಗಮದ ನದಿ ಮದ್ಯ ಭಾಗದಲ್ಲಿರುವ ನಡುಹೊಳೆ ಬಸಪ್ಪ ಮುಂಭಾಗ ಪೂಜೆ ಸಲ್ಲಿಸಿ ಕುಂಭಮೇಳಕ್ಕೆ ಚಾಲನೆ ನೀಡಲಾಗಿದೆ. ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥೆಶ್ವರ ಸ್ವಾಮೀಜಿ, ಕಾಗಿನೆಲೆ ಕನಕಗುರು ಮಠದ ನಿರಂಜನಾನಂದ ಪುರಿ ಸ್ವಾಮೀಜಿ, ಕೈಲಾಸನಂದ ಮಠದ ಜಯೇಂದ್ರ ಪುರಿ ಗಳಿಂದ ಪೂಜಾ ಕೈಂಕರ್ಯ ನೆರವೇರಿದೆ. ಇನ್ನೂ ಕುಂಭಮೇಳಕ್ಕೆ ಸಾವಿರಾರು ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದಾರೆ.