ದೇಶ

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಗಮನ ಸೆಳೆದ ಲಕ್ಕುಂಡಿ ಶಿಲ್ಪಕಲೆ

ಅಹಿಂಸಾವಾದಿ ನೆಲೆವೀಡಾಗಿರುವ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ದೇಶದ ಕಣ್ಮನ ಸೆಳೆದಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜೋತ್ಸವ ಪಥಸಂಚಲನದಲ್ಲಿ ಕರ್ನಾಟಾಕದಿಂದ ರಾಜ್ಯದ ಐತಿಹಾಸಿಕ ನಗರವಾದ ಲಕ್ಕುಂಡಿಯ ಕಲಾತ್ಮಕ ದೇವಾಲಯಗಳ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಾಯಿತು.

ಗಣರಾಜ್ಯೋತ್ಸವದ ಫತಸಂಚಲನದಲ್ಲಿ ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯ ಪುರಾತನ ದೇವಾಲಯವಾದ ಬ್ರಹ್ಮ ಜಿನ ದೇವಾಲಯದ ಬ್ರಹ್ಮ ಪ್ರತಿಮೆಯನ್ನು ಪ್ರದರ್ಶಿಸಲಾಯಿತು. ಅಹಿಂಸಾವಾದಿ ನೆಲೆವೀಡಾಗಿರುವ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ದೇಶದ ಕಣ್ಮನ ಸೆಳೆದಿದೆ.