ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರ ದೊಡ್ಡ ಸಂಚಲನ ಸೃಷ್ಟಿಸಿದೆ.ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, 80 ಸಾವಿರ ಬಿಪಿಎಲ್ ಕಾರ್ಡ್ಗಳನ್ನು ರದ್ದತಿ ಮಾಡುವ ಬದಲು, ಎಪಿಎಲ್ಗೆ ವರ್ಗಾವಣೆ ಮಾಡಿದ್ದಾಋಎ. ಎಪಿಎಲ್ ಆಗಲಿ ಬಿಪಿಎಲ್ ಆಗಲಿ ತೆರಿಗೆ ಕಟ್ಟದವರಿಗೆ ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.