ಕರ್ನಾಟಕ

ಉಪಚುನಾವಣೆಗೆ ಇನ್ನೆರಡೇ ದಿನ ಬಾಕಿ..ಚನ್ನಪಟ್ಟಣದಲ್ಲಿ ಕಾಂಗ್ರೆಸ್, NDA ಬೃಹತ್ ಸಮಾವೇಶ..!

ಇಂದು ಚನ್ನಪಟ್ಟಣದಲ್ಲಿ ನಿರ್ಣಾಯಕ ಪ್ರಚಾರ ಹಿನ್ನೆಲೆ, ಉಭಯ ಅಭ್ಯರ್ಥಿಗಳಿಂದ ಬೃಹತ್ ಸಮಾವೇಶ ನಡೆಯಲಿದೆ.

ಕರ್ನಾಟಕ ಉಪಚುನಾವಣೆಗೆ ಇನ್ನೆರಡು ದಿನ ಮಾತ್ರ ಬಾಕಿ ಇದೆ. ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷಗಳು ಗೆಲುವಿಗಾಗಿ ಪಣ ತೊಟ್ಟಿವೆ. ಇಂದು ಚನ್ನಪಟ್ಟಣದಲ್ಲಿ ನಿರ್ಣಾಯಕ ಪ್ರಚಾರ ಹಿನ್ನೆಲೆ, ಉಭಯ ಅಭ್ಯರ್ಥಿಗಳಿಂದ ಬೃಹತ್ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.

ಇತ್ತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. ಕೊನೆಯ ಹಂತದಲ್ಲಿ ಮತಗಳನ್ನು ಸೆಳೆಯಲು ಎರಡೂ ಪಕ್ಷಗಳಿಂದ ಕಸರತ್ತು ನಡೆಯುತ್ತಿದೆ. ಇಂದು ಸಂಜೆ ಮನೆ-ಮನೆಗೆ ತೆರಳಿ ಪ್ರಚಾರ ನಡೆಸಲಾಗುತ್ತದೆ.