ಕರ್ನಾಟಕ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

ಕಬ್ಬು ಕಟಾವು ಮಾಡುವ ವೇಳೆಯೇ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ತಾಯಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಮಹೇಶ್ ಎಂಬುವರ, ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಕಬ್ಬು ಕಟಾವು ಮಾಡುವ ವೇಳೆಯೇ ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಕ್ಕೀಡಾಗಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಮರಿಗಳನ್ನು ತಮ್ಮ ಸುಪರ್ದಿಗೆ ಒಪ್ಪಿಸಿಕೊಂಡಿದ್ದಾರೆ. ತಾಯಿ ಚಿರತೆ ಸೆರೆಗಾಗಿ ಬೋನ್ ಅಳವಡಿಸಿದ್ದು, ಮರಿಗಳನ್ನು ಅದರೊಳಗೆ ಬಿಟ್ಟಿದ್ದಾರೆ.