ಮಂಡ್ಯ : ಬಸವಣ್ಣನವರ ಬಗ್ಗೆ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಯತ್ನಾಳ್ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಂಜುನಾಥ್, ವಿಶ್ವಗುರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಡುವುದು ಸರಿಯಲ್ಲ.ಲಿಂಗಾಯತ, ಬಸವಣ್ಣನವರ ಹೆಸರಿನ ಮೇಲೆ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯ ಸರ್ಕಾರ ತಕ್ಷಣವೇ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಯತ್ನಾಳ್ ಅವರನ್ನ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಬಿ.ವೈ.ವಿಜಯೇಂದ್ರ ಅವರು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಕಲ್ಯಾಣ ಬಸವೇಶ್ವರ ಮಠದ ಓಂಕಾರ್ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.