ಲಂಚ ಪಡೆಯುತ್ತಿರುವಾಗಲೇ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೇಔಟ್ ಅನುಮತಿ ಕೊಡಲು 40 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಅಧಿಕಾರಿ, 10 ಲಕ್ಷ ಹಣವನ್ನ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಉಮೇಶ್ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಬೀದರ್ ಲೋಕಾಯುಕ್ತ ಅಧಿಕಾರಿಗಳು, ಲಂಚಬಾಕ ಅಧಿಕಾರಿಯನ್ನು ಸೆರೆ ಹಿಡಿದಿದ್ದಾರೆ.