ಕರ್ನಾಟಕ

RTO ಕಚೇರಿ ಮೇಲೆ ಲೋಕಾಯುಕ್ತ ರೇಡ್!

ಮೈಸೂರಿನ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದಾರೆ.

ಮೈಸೂರು : ಮೈಸೂರಿನ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಅಧೀಕ್ಷಕ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮ್ಯಾತ್ಯು ಥಾಮಸ್ ನೇತೃತ್ವದ ತಂಡದಿಂದ ರೇಡ್‌ ಮಾಡಲಾಗಿದೆ. ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿರುವ ಲೋಕಾಯುಕ್ತ, ಐದು ವಾಹನದಲ್ಲಿ ಅಧಿಕಾರಿಗಳು ಆಗಮಿಸಿದ್ದಾರೆ. ಸದ್ಯ  ಅಧಿಕಾರಿಗಳು ದಾಖಲೆ ಮತ್ತು ಹಣ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಇನ್ಸ್ಪೆಕ್ಟರ್ ಉಮೇಶ್, ಅಶೋಕ್ ಕುಮಾರ್, ರೂಪಶ್ರೀ, ಶಶಿಕುಮಾರ್ ಸಿಬ್ಬಂದಿ ಭಾಗಿಯಾಗಿದ್ದಾರೆ.