ಕರ್ನಾಟಕ

ಮಡೆನೂರ್ ಮನು ಅಭಿನಯದ "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್

ಚಿತ್ರಕ್ಕೆ ರಾಮ್ ನಾರಾಯಣ್, ನಿರ್ದೇಶನ ಮಾಡಿದ್ದು, ನಾಯಕನಾಗಿ ಮಡೆನೂರ್ ಮನು, ನಾಯಕಿಯಾಗಿ ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಈಗಿನ ಜನರೇಷನ್ ಗೆ ಬೇಕಾದಂತಹ ಹಾಡುಗಳನ್ನು ಬರೆಯುವ ಗೀತರಚನೆಕಾರರಲ್ಲಿ ಯೋಗರಾಜ್ ಭಟ್ ಮೊದಲಿಗರು. ದಿನ ನಾವು ಆಡುವ ಮಾತುಗಳನ್ನೆ ಯೋಗರಾಜ್ ಭಟ್ ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. 

ಪ್ರಸ್ತುತ ಯೋಗರಾಜ್ ಭಟ್ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ "ನಮ್ ಪೈಕಿ ಒಬ್ಬ ಹೋಗ್ಬುಟ" ಎಂಬ ಹಾಡನ್ನು ಬರೆದಿದ್ದಾರೆ. ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ಆಂಥೋನಿ ದಾಸ್ ಕಂಠಸಿರಿಯಲ್ಲಿ‌ ಈ ಹಾಡು ಮೂಡಿಬಂದಿದೆ. ನಾಯಕ ನಟ ಮನು ಬ್ಯಾಂಡ್ ಬಾರಿಸಿಕೊಂಡು ಬ್ಯಾಂಡ್ ಸೆಟ್ ಅವರ ಹಾಗೂ ಅರ್ಕೆಸ್ಟ್ರಾ ಕಲಾವಿದರ ಜೊತೆಗೆ ವೇದಿಕೆಗೆ ಬಂದು ಈ‌ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.

ಚಿತ್ರಕ್ಕೆ ರಾಮ್ ನಾರಾಯಣ್, ನಿರ್ದೇಶನ ಮಾಡಿದ್ದು, ನಾಯಕನಾಗಿ ಮಡೆನೂರ್ ಮನು, ನಾಯಕಿಯಾಗಿ ಮೌನ ಗುಡ್ಡೆಮನೆ,  ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.