ಮಂಡ್ಯ : 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ. ಮಂಡ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ನೆರವೇರಿದ್ದು, ಮಂಡ್ಯ ಉಸ್ತುವಾರಿ ಹಾಗೂ ಕೃಷಿ ಸಚಿವ, ಎನ್. ಚಲುವರಾಯಸ್ವಾಮಿ ಧ್ವಜಾರೋಹಣ ನೆರೆವೇರಿಸಿದ್ದಾರೆ.

ಮಂಡ್ಯ ಜಿಲ್ಲಾಡಳಿತ, ಜಿ.ಪಂ.ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ನೆರವೇರಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣಕ್ಕೂ ಮುನ್ನ ತಾಯಿ ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿದ್ದಾರೆ. ಬಳಿಕ ಸಚಿವ ಎನ್.ಚಲುವರಾಯಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಇದೇ ವೇಳೆ ಶಾಸಕ ಗಣಿಗ ರವಿಕುಮಾರ್, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷ ನಾಗೇಶ್ ಸೇರಿ ಮತ್ತಿತರರು ಭಾಗಿಯಾಗಿದ್ದರು.
ಧ್ವಜಾರೋಹಣ ಬಳಿಕ ಸಚಿವ ಎನ್.ಚಲುವರಾಯಸ್ವಾಮಿ ಭಾಷಣ ಮಾಡಿದ್ದು, ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡ್ತಿದ್ದೇವೆ. ಕರ್ನಾಟಕದ ಏಕೀಕರಣಕ್ಕೆ ಹಲವರು ಕಾರಣರಾಗಿದ್ದಾರೆ. ಕನ್ನಡದ ಬಗ್ಗೆ ಹಲವರು ಸಾಹಿತ್ಯ ರಚಿಸಿದ್ದಾರೆ. ಕನ್ನಡದ ಮಹಾನಿಯರನ್ನ ನಾವೆಲ್ಲರೂ ನೆನೆಯಬೇಕು. ಕನ್ನಡ ಭಾಷೆಯ ಸಾಹಿತಿಗಳಿಗೆ ಪ್ರಶಸ್ತಿ ಸಿಕ್ಕಿದೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿದೆ. ಇದು ಹೆಮ್ಮೆಯ ವಿಷಯ, ನಾವೆಲ್ಲರೂ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು. ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕಿದೆ. ನಾವೆಲ್ಲರೂ ಒಗ್ಗೂಡಿ ಸಮ್ಮೇಳನ ಯಶಸ್ವಿಯಾಗಿ ಮಾಡಬೇಕು ಎಂದರು.
ಇದೇ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಇದೆ. ಸಾಕಷ್ಟು ಅಭಿವೃದ್ಧಿ ಕೆಲಸ, ಗ್ಯಾರಂಟಿ ಯೋಜನೆಗಳ ಒದಗಿಸಿದೆ. ಶಕ್ತಿ ಯೋಜನೆ, ಗೃಹ ಜ್ಯೋತಿ ಜನರಿಗೆ ತಲುಪಿಸಲಾಗುತ್ತಿದೆ. ಗೃಹ ಲಕ್ಷ್ಮಿ 2 ಸಾವಿರ ರೂ ಫಲಾನುಭವಿಗಳಿಗೆ ತಲುಪುತ್ತಿದೆ. ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮ ಕೊಡ್ತಿದೆ. ಮತ್ತೊಮ್ಮೆ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.