ಬೆಳಗಾವಿ : ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕೊಡ್ಲಿವಾಡ ಗ್ರಾಮದಲ್ಲಿ ಅತೀ ಹೆಚ್ಚು ಮಳೆಗೆ ಮೆಕ್ಕೆಜೋಳ ಬೆಳೆ ನೀರು ಪಾಲಾಗಿದೆ.
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದಲ್ಲಿ ಭಾರಿ ಮಳೆಗೆ ಮೆಕ್ಕೆಜೋಳ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಾಮಪ್ಪ ಹಾರಗೊಪ್ಪ ಎಂಬುವವರು ಮೂರು ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳವನ್ನ ಬೆಳೆದಿದ್ದರು. ಆದರೆ ನಿರಂತರ ಮಳೆಗೆ ಕಟಾವಿಗೆ ಬಂದಿದ್ದ ಬೆಳೆ ಸಂಪೂರ್ಣ ನಾಶವಾಗಿ ಹೋಗಿದೆ.
ಜಮೀನು ತುಂಬೆಲ್ಲಾ ನೀರು ನಿಂತು ಮೆಕ್ಕೆಜೋಳದ ಬೆಳೆ ನಾಶವಾಗಿದ್ದು, ರೈತನ ಜಮೀನಿಗೆ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಕಷ್ಟದಲ್ಲಿರುವ ರೈತ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಕೃಷಿ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನ ಸಲ್ಲಿಸಿದ್ದಾನೆ.