ಕರ್ನಾಟಕ

ವೈಭವದಿಂದ ಜರುಗಿದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೀಪಾವಳಿ ದೀವಟಿಗೆ ಉತ್ಸವ..!

ಪಂಜಿನ ಬೆಳಕಿನಲ್ಲಿ ನಡೆಯುವ ಉತ್ಸವಕ್ಕೆ ಬೆಟ್ಟದಪುರ ಸೇರಿ ಸುತ್ತಮುತ್ತಲಿನ ನೂರಾರು ಗ್ರಾಮಗಳ ಜನರು ಆಗಮಿಸಿ, ದೀವಟಿಗೆ ಸೇವೆ ಸಲ್ಲಿಸಿದ್ದಾರೆ.

ಮೈಸೂರು : ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೀಪಾವಳಿ ದೀವಟಿಗೆ ಉತ್ಸವ ವೈಭವದಿಂದ ಜರುಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ಐತಿಹಾಸಿಕ ಧಾರ್ಮಿಕ ಆಚರಣೆಯಾಗಿ ಸಿಡಿಲು ಮಲ್ಲಿಕಾರ್ಜುನಸ್ವಾಮಿಯ ದೀವಟಿಗೆ ಉತ್ಸವ ನಡೆದುಕೊMಡು ಬಂದಿದೆ. 

ಪಂಜಿನ ಬೆಳಕಿನಲ್ಲಿ ನಡೆಯುವ ಉತ್ಸವಕ್ಕೆ ಬೆಟ್ಟದಪುರ ಸೇರಿ ಸುತ್ತಮುತ್ತಲಿನ ನೂರಾರು ಗ್ರಾಮಗಳ ಜನರು ಆಗಮಿಸಿ, ದೀವಟಿಗೆ ಸೇವೆ ಸಲ್ಲಿಸಿದ್ದಾರೆ. ಬೆಟ್ಟದಪುರದಲ್ಲಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭ್ರಮರಾಂಭ ಉತ್ಸವ ಮೂರ್ತಿಗಳಿಗೆ ಗಿರಿಜಾ ಕಲ್ಯಾಣೋತ್ಸ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ.