ವೈರಲ್

ಭಜನೆ ಮಾಡುತ್ತಲೆ ಹೃದಯಾಘಾತದಿಂದ ವ್ಯಕ್ತಿ ಸಾವು..!

ಭಜನೆ ಮಾಡುತ್ತಲೆ ಕಲಾವಿದ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದಿದೆ.

ಕಿತ್ತೂರು: ಭಜನೆ ಮಾಡುತ್ತಲೆ ಕಲಾವಿದ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದಿದೆ.

ಮೂರು ದಿನಗಳ ಕಾಲ ನಡೆದ ವೀರರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ನಿಮಿತ್ತ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ, ಕಿತ್ತೂರು ತಾಲೂಕಿನ ಬಸಾಪೂರ ಗ್ರಾಮದ ಈರಪ್ಪ ಪಕ್ಕೀರಪ್ಪ ಬಬಲಿ (48) ಮೃತ ಕಲಾವಿದ. ಕಿತ್ತೂರು ವಿಜಯೋತ್ಸವ ಅಂಗವಾಗಿ ವೇದಿಕೆಯಲ್ಲಿ ಶನಿವಾರ ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಭಜನಾ ಸ್ಪರ್ಧೆ ನಡೆಯಿತು. ವೇದಿಕೆಯಲ್ಲಿ ತಂಡದೊಂದಿಗೆ ಭಾಗಿಯಾಗಿ ವೇದಿಕೆಯಿಂದ ನಿರ್ಗಮಿಸುವ ಸಮಯದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. 

ತಕ್ಷಣ ಕಲಾವಿದನನ್ನು ಸರ್ಕಾರಿ ತಾಲೂಕಾಸ್ಪತ್ರೆಗೆ ಒಯ್ಯಲಾಯಿತಾದರೂ ಅಷ್ಟೊತ್ತಿಗಾಗಲೇ ಅಸುನೀಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು.