ವೈರಲ್

ಡ್ಯಾನ್ಸ್ ಮಾಡುವಾಗಲೇ ಹಾರಿ ಹೋದ ಪ್ರಾಣಪಕ್ಷಿ

ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ನೋಡ ನೋಡುತ್ತಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗೌರಿ ವಿಸರ್ಜನೆ ಅಂಗವಾಗಿ ಕಲ್ಯಾಣ ಬಸವೇಶ್ವರ ಉತ್ಸವ ಹಮ್ಮಿಕೊಳ್ಳಲಾಗಿತ್ತು. ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ನೋಡ ನೋಡುತ್ತಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಚಾಮರಾಜನಗರ : ದೇವರ ಉತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ. ದೇವರ ಉತ್ಸವ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪದ್ದಾನೆ. ಬಾಬು (42) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈ ಕುರಿತ ವಿಡಿಯೋ ಒಂದು ವೈರಲ್ ಆಗಿದೆ.

ಹೌದು, ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ನೋಡ ನೋಡುತ್ತಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗೌರಿ ವಿಸರ್ಜನೆ ಅಂಗವಾಗಿ ಕಲ್ಯಾಣ ಬಸವೇಶ್ವರ ಉತ್ಸವ ಹಮ್ಮಿಕೊಳ್ಳಲಾಗಿತ್ತು. ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ನೋಡ ನೋಡುತ್ತಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇನ್ನೂ ಸೋಮವಾರ ಬೆಳಿಗ್ಗೆ ಹತ್ತು ಗಂಟೆ ಸಮಯದಲ್ಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.