ಯೋಗರಾಜ್ ಭಟ್ ಹಾಗೂ ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ, ಮುಂಗಾರು ಮಳೆ ಸಿನಿಮಾ ತೆರೆಕಂಡು ಸೂಪರ್ ಹಿಟ್ ಆಗಿತ್ತು..ಇದೀಗ ಹದಿನೆಂಟು ವರ್ಷಗಳ ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ.

ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು".

ಸುಮುಖ ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇಲ್ಲಿ ರಂಗಾಯಣ ರಘು ಆದಿವಾಸಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಗಾಗಿ ಹೊಸ ಭಾಷೆ ಸೃಷ್ಟಿಯಾಗಿದೆ. ಇನ್ನು ಈ ಚಿತ್ರದಲ್ಲಿ ಹಿರಿಯ ನಟ ದತ್ತಣ್ಣ ನಾನು 100 ವರ್ಷದ ಮುದುಕನ ಪಾತ್ರ ಮಾಡಿದ್ದಾರೆ..

ಸದ್ಯ ಬೆಂಗಳೂರಿನ ಅರಮನೆ ಆವರಣದಲ್ಲಿ ಚಿತ್ರೀಕರಣ ನಡೆಯುತ್ತಿದೆ..ಈಗಾಗಲೇ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ನಡೆದಿದೆ..ಅದರಲ್ಲೂ ಕರ್ನಾಟಕದ 12 ಜಿಲ್ಲೆಗಳಲ್ಲಿ ಜಿತ್ರೀಕರಣ ಮಾಡಿದ್ದು,,. ಮಹಾರಾಷ್ಟ್ರದ ಮುರುಡ್ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಿರೋದು ವಿಶೇಷ.
ಈಗಾಗಲೇ ಶೇ. 95ರಷ್ಟು ಚಿತ್ರೀಕರಣ ಮುಗಿದಿದೆ ಎಂದರು .
ಚಿತ್ರಕ್ಕೆ ವಿ. ಹರಿಕೃಷ್ಣ ಮ್ಯೂಸಿಕ್,
ಸಂತೋಷ್ ರೈ ಪಾತಾಜೆ ಕ್ಯಾಮೆರಾ ವರ್ಕ್ ಇದೆ ..ಜಯಂತ್ ಕಾಯ್ಕಿಣಿ ಸಾಹಿತ್ಯ ಚಿತ್ರಕ್ಕಿದೆ..