ಕರ್ನಾಟಕ

ಮಂಡ್ಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ..ಮಾಧ್ಯಮ ಲೋಕಕ್ಕೆ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

ಮಂಡ್ಯ ಜಿಲ್ಲಾಡಳಿತ ವತಿಯಿಂದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ, ಪತ್ರಕರ್ತರಿಗೆ ಸಚಿವ ಎನ್.ಚಲುವರಾಯಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಮಂಡ್ಯದಲ್ಲಿ ಕೂಡ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಮಾಧ್ಯಮ ರಂಗದಲ್ಲಿ ಸೇವೆ ಸಲ್ಲಿಸಿದ ಮಂಡ್ಯ ಜಿಲ್ಲಾ ಪತ್ರಕರ್ತರಿಗೆ ಇಂದು, ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಹಿರಿಯ ಪತ್ರಕರ್ತ ಬಸವರಾಜ ಹೆಗ್ಗಡೆ  ಹಾಗೂ ಟಿವಿ೫ ಕ್ಯಾಮೆರಾಮನ್‌ ಕೆ.ಪಿ.ರಜನೀಶ್‌ ಪಾಟೀಲ್‌ ಸೇರಿ 21 ಮಂದಿಗೆ, 69ನೇ ಕನ್ನಡ ರಾಜ್ಯೋತ್ಸವದ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ. 

ಮಂಡ್ಯ ಜಿಲ್ಲಾಡಳಿತ ವತಿಯಿಂದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ, ಪತ್ರಕರ್ತರಿಗೆ ಸಚಿವ ಎನ್.ಚಲುವರಾಯಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.