ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆದ ಉಪಚುನಾವಣೆೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಿಜೆಪಿಯ ನಾಯಕ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಅಂದಾಜು 3673 ಮತ ಗಳಿಸಿದ್ದರೆ, ಕಾಂಗ್ರೆಸ್ ನ ರಾಜು ಪೂಜಾರಿ 1000 ಚಿಲ್ಲರೆ ಮತ ಗಳಿಸಿದ್ದಾರೆ.