ಕರ್ನಾಟಕ

ಕಾಂಗ್ರೆಸ್ ಗ್ಯಾರಂಟಿಗಳು ಪುರುಷರ ಮೇಲಿನ ಹೊರೆ ಇಳಿಸಿವೆ ; ಸಚಿವ ಮಂಕಾಳು ವೈದ್ಯ

ಕಾಂಗ್ರೆಸ್ ಗ್ಯಾರಂಟಿಗಳಿಂದ ಮನೆಯ ಮಹಿಳೆಯು ಕೂಡ ಆರ್ಥಿಕವಾಗಿ ಜವಾಬ್ದಾರಿ ನಿರ್ವಹಿಸುವಂತಾಗಿದೆ. ಇದರಿಂದ ಪುರುಷರ ಮೇಲಿನ ಆರ್ಥಿಕ ಹೊರೆ ಇಳಿದಿದೆ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡಿರುವ ಗ್ಯಾರಂಟಿಗಳು ಪುರುಷರ ಮೇಲಿನ ಹೊರೆ ಇಳಿಸಿವೆ ಎಂದು ಸಚಿವ ಮಂಕಾಳು ವೈದ್ಯ ಹೇಳಿಕೆ ನೀಡಿದ್ದಾರೆ. ಉತ್ತರ ಕನ್ನಡದ ಮುಂಡಗೋಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿಗಳು ಕುಟುಂಬದ ಆರ್ಥಿಕ ಸುಧಾರಣೆಗೆ ಸಹಾಯಕರವಾಗಿವೆ. ಮನೆಯ ಮಹಿಳೆಯು ಕೂಡ ಆರ್ಥಿಕವಾಗಿ ಜವಾಬ್ದಾರಿ ನಿರ್ವಹಿಸುವಂತಾಗಿದೆ. ಇದರಿಂದ ಪುರುಷರ ಮೇಲಿನ ಆರ್ಥಿಕ ಹೊರೆ ಇಳಿದಿದೆ. ಈ ಮೂಲಕ ಕಾಂಗ್ರೆಸ್ ಗ್ಯಾರಂಟಿಗಳು ಜನ ಸಾಮಾನ್ಯರ ಕುಟುಂಬ ನಿರ್ವಹಣೆಗೆ ಸಹಾಯಕವಾಗಿವೆ ಎಂದರು.