ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ ಡಾ. ಸಿಂಗ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ದೆಹಲಿ ಸಿಎಂ ಅತಿಶಿ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಡಾ. ಸಿಂಗ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ಮನಮೋಹನ್ ಸಿಂಗ್ ಅವರ ಆಡಳಿತವನ್ನ ಮೆಲುಕು ಹಾಕಿದ್ದಾರೆ.