ಕ್ರೀಡೆಗಳು
ಮನು ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪುರಸ್ಕಾರ
ಒಲಿಂಪಿಕ್ ಪದಕ ವಿಜೇತ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ 18 ವರ್ಷದ ಗುಕೇಶ್ ಡಿ, ಹಾಕಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್‌ಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ನಾಲ್ವರು ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಲ್ವರು ಕ್ರೀಡಪಟುಗಳಿಗೆ ಪ್ರಶಸ್ತಿ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವಿಸಿದ್ದಾರೆ. ಒಲಿಂಪಿಕ್ ಪದಕ ವಿಜೇತ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ 18 ವರ್ಷದ ಗುಕೇಶ್ ಡಿ, ಹಾಕಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್‌ಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.