ದೇಶ

ಮನು ಭಾಕರ್, ಡಿ.ಗುಕೇಶ್ ಸೇರಿ ನಾಲ್ವರು ಕ್ರೀಡಾಪಟುಗಳಿಗೆ ʼಖೇಲ್‌ರತ್ನʼ ಪ್ರಶಸ್ತಿ

ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಈ ನಾಲ್ವರು ಕ್ರೀಡಾ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನುಭಾಕರ್, ಚೆಸ್ ವರ್ಲ್ಡ್ ಚಾಂಪಿಯನ್ ಡಿ.ಗುಕೇಶ್ ಸೇರಿ ನಾಲ್ವರು ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಧ್ಯಾನ್‌ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ.. ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದ್ದಾರೆ. ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಈ ನಾಲ್ವರು ಕ್ರೀಡಾ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.