2024ರ ಚುನಾವಣೆಯಲ್ಲಿ ಭಾರತದ ಅಂದಿನ ಸರ್ಕಾರ ಅಧಿಕಾರ ಕಳೆದುಕೊಂಡಿತು ಎಂಬ ಮಾರ್ಕ್ ಜುಕರ್‌ಬರ್ಗ್ ಹೇಳಿಕೆಗೆ ವ್ಯಾಪಕ ಆಕ್ರೋಶ, ವಿರೋಧ ವ್ಯಕ್ತವಾದ ಬೆನ್ನಲ್ಲೇ ಮೆಟಾ (META) ಕ್ಷಮೆ ಕೇಳಿದೆ.. ಮಾರ್ಕ್ ಜುಕರ್‌ಬರ್ಗ್ ಹೇಳಿಕೆಗೆ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನ ಉದ್ದೇಶಿಸಿ ಪ್ರತಿಕ್ರಿಯೆ ನೀಡಿರುವ ಮೆಟಾ, 2024ರ ಎಲೆಕ್ಷನ್‌ನಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಕೋವಿಡ್ ನಂತರ ಸೋತಿವೆ ಎಂಬ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ, ಅಧಿಕಾರದಲ್ಲಿದ್ದ ಹಲವು ಪಕ್ಷಗಳು 2024ರಲ್ಲಿ ಮತ್ತೆ ಅಧಿಕಾರಕ್ಕೆ ಬರಲಿಲ್ಲ ಎಂಬ ಮಾರ್ಕ್ ಜುಕರ್‌ಬರ್ಗ್ ಹೇಳಿಕೆ ಹಲವು ರಾಷ್ಟ್ರಗಳಿಗೆ ಹೊಂದಾಣಿಕೆಯಾಗುತ್ತದೆ.. ಆದರೆ ಭಾರತಕ್ಕೆ ಅಲ್ಲ ಎಂದು ಸ್ಪಷ್ಟನೆ ನೀಡಿದೆ.. ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ, ಭಾರತವು ಮೆಟಾಗೆ (META)ಪ್ರಮುಖ ದೇಶವಾಗಿ ಉಳಿದಿದೆ ಮತ್ತು ಭಾರತ ಹೊಸ ಭವಿಷ್ಯದ ಕೇಂದ್ರಭಾಗದಲ್ಲಿರುವುದನ್ನು ನಾವು ಎದುರು ನೋಡುತ್ತಿದ್ದೇವ ಎಂದಿದೆ..