ಕರ್ನಾಟಕ

ಧಾರಾಕಾರ ಮಳೆಯಿಂದ ಮಾರ್ಕೋನಳ್ಳಿ ಡ್ಯಾಂ ಭರ್ತಿ..ರೈತರಲ್ಲಿ ಸಂತಸ

ಎರಡು ವರ್ಷದ ಬಳಿಕ ಜಲಾಶಯ ಭರ್ತಿಯಾದ ಹಿನ್ನೆಲೆ ರೈತರಲ್ಲಿ ಸಂತಸ ಮೂಡಿದೆ. ಇಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್​​ ಬಾಗಿನ ಅರ್ಪಣೆ ಮಾಡಲಿದ್ದಾರೆ.

ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ, ಪ್ರಸಿದ್ಧ ಮಾರ್ಕೋನಳ್ಳಿ ಜಲಾಶಯ ಭರ್ತಿಯಾಗಿದೆ. ಸ್ವಯಂ ಚಾಲಿನ ಸೈಫನ್ ಮೂಲಕ ಡ್ಯಾಂನಿಂದ ನೀರು ಹೊರ ಹಾಕಲಾಗುತ್ತಿದೆ. 

ಸತತ 3 ದಿನಗಳಿಂದ ಸತತವಾಗಿ ಸುರಿದ ಧಾರಾಕಾರವಾಗಿ ಸುರಿದ ಮಳೆಯಿಂದ, 1527 ಕ್ಯೂಸೆಕ್ ನೀರು ಒಳ ಹರಿವಾಗಿದೆ. ಹೀಗಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ, ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಮಾರ್ಕೋನಳ್ಳಿ, ಕಾಡುಶೆಟ್ಟಿಹಳ್ಳಿ, ಬಿಸಿನೆಲೆ, ತೊರೆಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಸೂಚನೆ ನೀಡಲಾಗಿದೆ. ಎರಡು  ವರ್ಷದ ಬಳಿಕ ಜಲಾಶಯ ಭರ್ತಿಯಾದ ಹಿನ್ನೆಲೆ ರೈತರಲ್ಲಿ ಸಂತಸ ಮೂಡಿದೆ. ಇಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಬಾಗಿನ ಅರ್ಪಣೆ ಮಾಡಲಿದ್ದಾರೆ. 

.