ನಟ ರಾಕ್ಷಸ ಡಾಲಿ ಧನಂಜಯ ಮನೆಯಲ್ಲಿ ಮದುವೆ ಶಾಸ್ತ್ರಗಳು ಆರಂಭವಾಗಿವೆ. ಫೆಬ್ರವರಿ 16 ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದ್ದು, ಇಂದಿನಿಂದಲೇ ಮದುವೆ ಕಾರ್ಯಗಳು ಶುರುವಾಗಿವೆ. ಧನಂಜಯ ಅವರ ಹುಟ್ಟೂರಾದ ಕಾಳೇನಹಳ್ಳಿಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದ್ದು, ಸಂಪ್ರದಾಯದಂತೆ ಡಾಲಿ ಧನಂಜಯ ಅರಸಿಕೆರೆಯ ಜೇನುಕಲ್ಲು ಸಿದ್ದೇಶ್ವರ ದೇವರ ಕೊಂಡ ತುಳಿದಿದ್ದಾರೆ. ನಂತರ ಮನೆಯಲ್ಲಿ ಮನೆದೇವರ ಪೂಜೆಯನ್ನ ನೆರವೇರಿಸಿದ್ದಾರೆ.
ಫೆಬ್ರವರಿ 16ಕ್ಕೆ ದಾಂಪತ್ಯ ಜೀವನಕ್ಕೆ ಡಾಲಿ ಹಾಗೂ ಧನ್ಯತಾ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ.