ತುಮಕೂರಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ನೌಕರರು ಬೃಹತ್ ಪ್ರತಿಭಟನೆ ಮಾಡಿದ್ದಾರೆ. ತುಮಕೂರು ಮಹಾನಗರ ಪಾಲಿಕೆ ಕಚೇರಿಯಿಂದ, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನೆ ಮಾಡಲಾಗಿದೆ. ಮುನ್ಸಿಪಾಲಿಟಿ, ಸರ್ಕಾರಿ ಆಸ್ಪತ್ರೆಗಳು, ನಿಗಮ ಮತ್ತು ಮಂಡಳಿಗಳು, ಸರ್ಕಾದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ ನಡೆದಿದೆ.
ಹೊರಗುತ್ತಿಗೆ ನೌಕರರ ಬೇಡಿಕೆಗಳು
- ಎಲ್ಲಾ ಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಖಾಯಂ ಗೋಳಿಸಬೇಕು.
- ಗುತ್ತಿಗೆ ಕಾರ್ಮಿಕರಿಗೆ ಸುಪ್ರೀಂ ಕೋರ್ಟ್ ತೀರ್ಪಿನಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು.
- ಗುತ್ತಿಗೆ ಕಾರ್ಮಿಕರ ಸೇವೆ ಸಹಕಾರಿ ಸಂಘದಡಿಯಲ್ಲಿ ತರುವ ಯೋಜನೆಯನ್ನು ನಿಲ್ಲಿಸಬೇಕು.
- ಎಲ್ಲಾ ಗುತ್ತಿಗೆ ಕಾರ್ಮಿಕರ ನೇರ ಪಾವತಿಯಡಿಯಲ್ಲಿ ನೇಮಿಸಬೇಕು.