ಶಿವಮೊಗ್ಗ : ಸಂಜೆ ವಾಕಿಂಗ್ ಹೋಗಿದ್ದ ವೈದ್ಯಕೀಯ ವಿದ್ಯಾರ್ಥಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು MBBS ವಿದ್ಯಾರ್ಥಿಯೊಬ್ಬ ಮೃತಪಟ್ಟಿದದ್ದು, ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಈ ಘಟನೆ ಸಂಭವಿಸಿದೆ.
ಹೌದು, ಶಿವಮೊಗ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಥಮ ವರ್ಷದ ಎಂಬಿಬಿಎಸ್ ಒದುತ್ತಿದ್ದ ಪೃಥ್ವಿರಾಜ್ ಎಂಬ (20) ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಂಜೆ ವಾಯು ವಿಹಾರಕ್ಕೆ ತೆರಳಿದ್ದಾಗ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದು, ಆದರೆ ಆಹೊತ್ತಿಗಾಗಲೆ ಪೃಥ್ವಿರಾಜ್ ಕೊನೆಯುಸಿರೆಳೆದಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.