ರಾಜ್ಯದಲ್ಲಿ ಬಾಣಂತಿಯರ ಸಾವಿನ ಬಗ್ಗೆ ವ್ಯಾಪಕವಾಗಿ ಚರ್ಚೆ ಆಗ್ತಿರುವ ಹೊತ್ತಿನಲ್ಲಿಯೇ ಇದೀಗ ರಾಜಧಾನಿ ಬೆಂಗಳೂರಿನಲ್ಲೇ ಬಾಣಂತಿ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಜಿಲ್ಲೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ವೇಳೆಯೇ ಮತ್ತೋರ್ವ ಬಾಣಂತಿ ಕೊನೆಯುಸಿರೆಳೆದಿದ್ದಾರೆ.. ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಒಂದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದ ಮಹಿಳೆ, ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.