ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ಬಾಣಂತಿಯರ ಸಾವಿಗೆ ಕೇವಲ ಔಷಧಿಯಷ್ಟೇ ಕಾರಣವಲ್ಲ ಎಂದು, ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಹೇಳಿದ್ದಾರೆ. ಅಂದರೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣವಷ್ಟೇ ಅಲ್ಲದೇ, ಆಸ್ಪತ್ರೆಯ ಅವ್ಯವಸ್ಥೆಯೂ ಕೂಡ ಕಾರಣವಿರಬಹುದು. ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆಯೂ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ನಿನ್ನೆ (ಶುಕ್ರವಾರ) ಬಳ್ಳಾರಿ ಆಸ್ಪತ್ರೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರ ಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಕೂಡ ಪರೀಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರೀತಿ ಅನುಮಾನ ವ್ಯಕ್ತಪಡಿಸಿದ್ದಾರೆ.