ಕರ್ನಾಟಕ

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆನ್ನುಮೂಳೆಗೆ ಪೆಟ್ಟು..! ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ

ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕರೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.. ಪೋನ್‌ ಕರೆ ಮಾಡಿ ಧೈರ್ಯ ತುಂಬಿದ್ದಾರೆ..

ಭೀಕರ ಕಾರು ಅಪಘಾತ ಪ್ರಕರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆನ್ನುಮೂಳೆಗೆ ಬಲವಾದ ಪೆಟು ಬಿದ್ದಿದೆ.. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಿಟಿ ಸ್ಕಾನ್ ರಿಪೋರ್ಟ್‌ನಲ್ಲಿ ಬೆನ್ನುಮೂಳೆಗೆ ಪೆಟ್ಟಾಗಿರೋದು ಪತ್ತೆಯಾಗಿದೆ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆನ್ನಿನ L-1 ಮತ್ತು L-4 ಮೂಳೆಗೆ ಗಂಭೀರವಾಗಿ ಫ್ಯಾಕ್ಚರ್‌ ಆಗಿದೆ.. ಖಾಸಗಿ ಆಸ್ಪತ್ರೆಯ ಡಾ. ರವಿ ನೇತೃತ್ವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಖರ್‌ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿಶೇಷ ವಾರ್ಡ್‌ನಲ್ಲಿ ಇರಿಸಲಾಗಿದೆ.. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಬಳಿಕವೂ ಬರೋಬ್ಬರಿ ಒಂದು ತಿಂಗಳು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಡ್‌ ರೆಸ್ಟ್‌ ಮಾಡಲೇಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.. ಆಸ್ಪತ್ರೆಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕರೆ ಮಾಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.. ಪೋನ್‌ ಕರೆ ಮಾಡಿ ಧೈರ್ಯ ತುಂಬಿದ್ದಾರೆ.. ಇಂದು ಬೆಳಗ್ಗೆ 6 ಗಂಟೆಗೆ ಅಪಘಾತ ಸಂಭವಿಸಿದೆ.. ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ವಾಹನ ಮುಂಭಾಗ ನಜ್ಜುಗುಜ್ಜಾಗಿದೆ.. ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ..