ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ರಸ್ತೆಯಲ್ಲಿ ಕಾರಿಗೆ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.. ಡೆಡ್ಲಿ ಆಕ್ಸಿಡೆಂಟ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರ ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಇಂದು ಬೆಳಗ್ಗೆ 6 ಗಂಟೆಗೆ ಅಪಘಾತ ಸಂಭವಿಸಿದೆ.. ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ವಾಹನ ಮುಂಭಾಗ ನಜ್ಜುಗುಜ್ಜಾಗಿದೆ.. ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ನನಗೆ ಏನೂ ಆಗಿಲ್ಲ.. ಯಾರೂ ಗಾಬರಿ ಆಗೋದು ಬೇಡ ಅಂತಾ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ಆಸ್ಪತ್ರೆಯ ಸ್ಪೆಷಲ್ ವಾರ್ಡ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಇರಿಸಲಾಗಿದೆ.. ಬೆಂಗಳೂರಿನ ಸಿಎಲ್ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ..