ದೇಶ

ದೆಹಲಿಯಲ್ಲಿ ಕೇಂದ್ರ ಸಚಿವ HDK ಭೇಟಿಯಾದ ಸಚಿವ ಎಂ.ಬಿ.ಪಾಟೀಲ್

ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಪಾಟೀಲ್ ಅವರು; ತಾವು ತಪ್ಪದೇ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ತಮ್ಮ ಸಹಕಾರ ಅಗತ್ಯ ಬೇಕಿದೆ ಎಂದು ಅವರು ಕೋರಿದರು.

ನವದೆಹಲಿ: ಕರ್ನಾಟಕದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಎಂದು ಆಹ್ವಾನ ನೀಡಿದರು.

ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಪಾಟೀಲ್ ಅವರು; ತಾವು ತಪ್ಪದೇ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ತಮ್ಮ ಸಹಕಾರ ಅಗತ್ಯ ಬೇಕಿದೆ ಎಂದು ಅವರು ಕೋರಿದರು.

ಕರ್ನಾಟಕದ ಕೈಗಾರಿಕಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಮತ್ತಿತರರು ಪಾಟೀಲ್ ಅವರ ನಿಯೋಗದಲ್ಲಿದ್ದರು.