ಮೈಸೂರು : ಕರ್ನಾಟಕದ ಹಲವಾರು ಜಿಲ್ಲೆಗಳು ಜಲಪ್ರಳಯದಲ್ಲಿ ಸಿಲುಕಿವೆ. ಜನರು ಹೊರಗಡೆ ಬರಲು ಸಾಧ್ಯವಾಗದೆ ಪರದಾಟ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಿಎಂ ಡಿಸಿಎಂ ನಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಇದ್ದಾರೆ. ಜಿಲ್ಲಾ ಮಂತ್ರಿಗಳು ಕೂಡ ಜಿಲ್ಲೆಗಳ ಬಗ್ಗೆ ಗಮನ ಕೊಡುತ್ತಿಲ್ಲ, ಇದು ವಿಷಾದನೀಯ, ಸಿಎಂ ಡಿಸಿಎಂ ಮಂತ್ರಿಗಳ ವಿರುದ್ಧ ಅಸಮಾದಾನ ಎಂ.ಎಲ್.ಸಿ ವಿಶ್ವನಾಥ್ ಹೊರ ಹಾಕಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಉಪಚುನಾವಣೆ ವಿಚಾರದಲ್ಲಿ ಮೂರು ಪಕ್ಷಗಳ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ. ಜನರ ಕಷ್ಟಗಳು ಇವರ ಕಣ್ಣಿಗೆ ಕಾಣುತ್ತಿಲ್ಲ, ಜನರು ಸರ್ಕಾರದ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಎಲ್ರೂ ರಾಜಧಾನಿ ಬಿಟ್ಟು ಕದಲುತ್ತಿಲ್ಲ, ಸಮಸ್ಯೆಗಳನ್ನು ಎದುರಿಸಲು ಸಿದ್ದವಾಗಿದ್ದೇವೆ ಎನ್ನುತ್ತಾರೆ. ಆದ್ರೆ ಜನರಿಗೆ ಯಾವ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಹೇಳಿದ್ದಾರೆ.