ಕರ್ನಾಟಕ

ಆಧುನಿಕ ಅಭಿಮನ್ಯು ನಿಖಿಲ್ ಒಂಟಿಯಲ್ಲ- BC ಪಾಟೀಲ್

ಮಹಾಭಾರತದಲ್ಲಿ ಅಭಿಮನ್ಯು ಯುದ್ಧದಲ್ಲಿ ಒಬ್ಬನೇ ಆಗಿದ್ದ. ಅವನು ಶೂರನಾಗಿದ್ದ, ವೀರನಾಗಿದ್ದ. ಆದರೆ, ಕುತಂತ್ರದಿಂದ ಸೋಲಿಸಲಾಯಿತು, ಅರ್ಜುನನನ್ನು ಹೊರಗೆ ಮೋಸದಿಂದ ಕಳಿಸಿ ಕೊಲ್ಲಲಾಯಿತು. ಆದರೆ, ಆಧುನಿಕ ಅಭಿಮನ್ಯು ನಿಖಿಲ್ ಒಂಟಿಯಲ್ಲ, ಭೀಷ್ಮ, ದ್ರೋಣ, ಅರ್ಜುನ ಎಲ್ಲರೂ ಜತೆಯಲ್ಲಿಯೇ ಇದ್ದಾರೆ.

ರಾಮನಗರ : ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ ಅಭಿಮನ್ಯು ಕಥೆ ಎಂದಿದಕ್ಕೆ, ಈ ಯುದ್ಧದಲ್ಲಿ ಭೀಷ್ಮ, ದ್ರೋಣ, ಅರ್ಜುನ ಎಲ್ಲಾರೂ ಜತೆಯಲ್ಲೇ ಇದ್ದಾರೆ. ನಿಖಿಲ್ ಈ ಬಾರಿ ಸೋಲುವುದಿಲ್ಲ. ಅವರು ದೊಡ್ಡ ಮಟ್ಟದ ಬಹುಮತದೊಂದಿಗೆ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ.

B C Patil (@bcpatilkourava) / X

ನಿಖಿಲ್ ಅವರ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಬಿಸಿ ಪಾಟೀಲ್ ಮಾತನಾಡಿ, ಮಹಾಭಾರತದಲ್ಲಿ ಅಭಿಮನ್ಯು ಯುದ್ಧದಲ್ಲಿ ಒಬ್ಬನೇ ಆಗಿದ್ದ. ಅವನು ಶೂರನಾಗಿದ್ದ, ವೀರನಾಗಿದ್ದ. ಆದರೆ, ಕುತಂತ್ರದಿಂದ ಸೋಲಿಸಲಾಯಿತು, ಅರ್ಜುನನನ್ನು ಹೊರಗೆ ಮೋಸದಿಂದ ಕಳಿಸಿ ಕೊಲ್ಲಲಾಯಿತು. ಆದರೆ, ಆಧುನಿಕ ಅಭಿಮನ್ಯು ನಿಖಿಲ್ ಒಂಟಿಯಲ್ಲ, ಭೀಷ್ಮ, ದ್ರೋಣ, ಅರ್ಜುನ ಎಲ್ಲರೂ ಜತೆಯಲ್ಲಿಯೇ ಇದ್ದಾರೆ. ಭೀಷ್ಮ ಎಂದರೆ ದೇವೇಗೌಡರು, ದ್ರೋಣ ಎಂದರೆ ಯಡಿಯೂರಪ್ಪ, ಅರ್ಜುನ ಎಂದರೆ ಕುಮಾರಸ್ವಾಮಿ ಅವರು ಎಂದು ಪಾಟೀಲರು ಬಣ್ಣಿಸಿದರು.