ದೇಶ

ಶಿವಾಶಿ ಮಹಾರಾಜರಿಗೆ ಮೋದಿ ನುಡಿ ನಮನ

ಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಶಿವಾಜಿ ಮಹಾರಾಜರಿಗೆ ನುಡಿ ನಮನವನ್ನ ಸಲ್ಲಿಸಿದ್ದಾರೆ.

ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜನ್ಮದಿನವನ್ನ ದೇಶದ ನಾಯಕರು ಸ್ಮರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಕುಮಾರಸ್ವಾಮಿ  ಸೇರಿ ಹಲವು ಗಣ್ಯರು ಶಿವಾಜಿ ಮಹಾರಾಜರಿಗೆ ನುಡಿ ನಮನವನ್ನ ಸಲ್ಲಿಸಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ. ನಾನು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಧೈರ್ಯ ಮತ್ತು ಉತ್ತಮ ಆಡಳಿತದ ಮಾದರಿ ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.