ದೇಶ

5 ವರ್ಷಗಳ ನಂತರ ಮೋದಿ-ಜಿನ್ಪಿಂಗ್ ಭೇಟಿ..! ಬಗೆಹರೆಯುತ್ತಾ ಭಾರತ -ಚೀನಾ ಗಡಿ ವಿವಾದ..?

5 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ತಿಳಿಸಿದ್ದಾರೆ.

ನವದೆಹಲಿ: 5 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ತಿಳಿಸಿದ್ದಾರೆ.

ಇಂದು ರಷ್ಯಾದ ಕಜಾನ್ ನಗರದಲ್ಲಿ ಎರಡನೇ ದಿನದ  ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದೆ.  ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉಭಯ ನಾಯಕರ ನಡುವಿನ ಈ ಔಪಚಾರಿಕ ಮಾತುಕತೆ ಸುಮಾರು 5 ವರ್ಷಗಳ ನಂತರ ನಡೆಯಲಿದೆ. 2020 ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ, ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯದಿಂದ ದೂರ ಉಳಿದಿದ್ದವು. 

ಕಳೆದ ನಾಲ್ಕು ವರ್ಷಗಳಿಂದ ಲಡಾಖ್ನ ಎಲ್ಎಸಿಯಲ್ಲಿ ಭಾರತ ಮತ್ತು ಚೀನಾ ನಡುವಿನ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ  ಈ ಸಭೆ ನಡೆಯಲಿದೆ. ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್ಪಿಂಗ್ ನಡುವಿನ ಕೊನೆಯ ಔಪಚಾರಿಕ ಸಭೆ 2019 ರ ಅಕ್ಟೋಬರ್ನಲ್ಲಿ ತಮಿಳುನಾಡಿನ ಐತಿಹಾಸಿಕ ನಗರ ಮಹಾಬಲಿಪುರಂನಲ್ಲಿ ನಡೆದಿತ್ತು.