ದೇಶ

ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದಾರೆ.. ಭಾರತೀಯರಿಗೆ ಅವಮಾನ - ರಾಹುಲ್‌ ಗಾಂಧಿ

ಮೋಹನ್ ಭಾಗವತ್ ಅವರ ಹೇಳಿಕೆ ದೇಶದ್ರೋಹದಂತಿದೆ ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ, ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಮಾಡಿದ ಅವಮಾನವಾಗಿದೆ ಮತ್ತು ನಮ್ಮ ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ..

ರಾಮಮಂದಿರ ಉದ್ಘಾಟನೆ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿಕೆ ನೀಡಿರುವ RSS ಮುಖ್ಯಸ್ಥ ಮೋಹನ್‌ ಭಾಗವತ್‌ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಮೋಹನ್ ಭಾಗವತ್ ಅವರ ಹೇಳಿಕೆ ದೇಶದ್ರೋಹದಂತಿದೆ ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ, ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಮಾಡಿದ ಅವಮಾನವಾಗಿದೆ ಮತ್ತು ನಮ್ಮ ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.. ದೆಹಲಿಯಲ್ಲಿ ಕಾಂಗ್ರೆಸ್‌ನ ಹೊಸ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಹೇಳಿದ್ದಾರೆ.. ನಾವು ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ.. ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ.. ಹೀಗಾಗಿ ಈ ಎರಡು ಸಂಸ್ಥೆಗಳು ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ ಎಂದು ಗುಡುಗಿದ್ದಾರೆ.. ಮೋಹನ್ ಭಾಗವತ್  ಸ್ವಾತಂತ್ರ್ಯ ಚಳವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ದೇಶಕ್ಕೆ ಹೇಳುವ ಧೈರ್ಯ ಹೊಂದಿದ್ದಾರೆ.. ಭಾರತ ಸ್ವಾತಂತ್ರ್ಯ ಕುರಿತು ಅವರು ನೀಡಿದ ಹೇಳಿಕೆ ದೇಶದ್ರೋಹವಾಗಿದೆ ಎಂದು ಆರೋಪಿಸಿದ್ದಾರೆ..