ಕರ್ನಾಟಕ

ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಜನರು ಅಸ್ವಸ್ಥ

ಅಸ್ವಸ್ಥರು ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೋರಲಮಾವು ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥರು ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.