ದೇಶ
ರೈಲು ಡಿಕ್ಕಿಯಾಗಿ 20ಕ್ಕೂ ಹೆಚ್ಚು ಮಂದಿ ದಾರುಣ ಸಾವು..!
ಮಹಾರಾಷ್ಟ್ರದ ಜಲಗಾಂವ್‌ನ ಪರಂದಾ ರೈಲು ನಿಲ್ದಾಣದ ಬಳಿ ಭಾರಿ ದುರಂತ ಸಂಭವಿಸಿದೆ.. ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿಯಿಂದ ಗಾಬರಿಗೊಂಡ ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ..
ಮಹಾರಾಷ್ಟ್ರದ ಜಲಗಾಂವ್‌ನ ಪರಂದಾ ರೈಲು ನಿಲ್ದಾಣದ ಬಳಿ ಭಾರಿ ದುರಂತ ಸಂಭವಿಸಿದೆ.. ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿಯಿಂದ ಗಾಬರಿಗೊಂಡ ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ.. ಅದೇ ಸಮಯಕ್ಕೆ ಎದುರಿಗೆ ಬರುತ್ತಿದ್ದ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು 20 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.. ವೇಗವಾಗಿ ಬಂದ ಪುಷ್ಪಕ್ ಎಕ್ಸ್‌ಪ್ರೆಸ್ ಬ್ರೇಕ್ ಹಾಕುತ್ತಿದ್ದಂತೆ ಕಿಡಿ ಹಾರಿದೆ.. ಈ ವೇಳೆ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಭಾವಿಸಿದ ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ.. ಆಗ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ.. ಸದ್ಯ ಪೊಲೀಸರು ಹಾಗೂ ರೈಲ್ವೆ ನೌಕರರು ಸ್ಥಳಕ್ಕೆ ದೌಡಾಯಿಸಿದ್ದಾರೆ...