ಮಹಾಕುಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಈವರೆಗೂ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವು-ನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.. ನಿನ್ನೆ ಮಧ್ಯರಾತ್ರಿ ಮೌನಿ ಅಮಾವಾಸ್ಯೆಯಂದು ಪುಣ್ಯಸ್ನಾನಕ್ಕೆ ಬಂದಿದ್ದ ಭಕ್ತರ ಮಧ್ಯೆ ತಳ್ಳಾಟ-ನೂಕಾಟವಾಗಿ ಕಾಲ್ತುಳಿತ ಶುರುವಾಗಿತ್ತು. ಹೀಗೇ ಶುರುವಾದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ಬೆಳಗಾವಿ ನಾಲ್ವರು ಸೇರಿ 30ಕ್ಕೂ ಹೆಚ್ಚು ಭಕ್ತರು ಕೊನೆಯುಸಿರೆಳೆದಿದ್ದಾರೆ. ಸಂಗಮ್‌ಘಾಟ್‌ನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಪ್ರತಿ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಇಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯರಾತ್ರಿ ಉಂಟಾದ ಕಾಲ್ತುಳಿತಕ್ಕೆ ಕಾರಣ ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಪ್ರಸ್ತುತ ಸಂಗಮ್ ಘಾಟ್‌ನಲ್ಲಿ ಪರಿಸ್ಥಿತಿ ಹೇಗಿದೆ ಎಂದು ವೀಕ್ಷಿಸಲಿದ್ದಾರೆ.