ವಿದೇಶ

ಪಾಕ್‌ ಸೇನೆಯಿಂದ 30ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ

ಪಾಕ್ ಮಿಲಿಟರಿಯ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಪ್ರಕಾರ ಲಕ್ಕಿ ಮಾರ್ವತ್‌ನಲ್ಲಿ 18 ಭಯೋತ್ಪಾದಕರು, ಕರಕ್ನಲ್ಲಿ 8 ಮಂದಿ ಟೆರರಿಸ್ಟ್‌, ಬಾಗ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ..

ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬರೋಬ್ಬರಿ 30ಕ್ಕೂ ಅಧಿಕ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕ್‌ ಸೇನೆ ಹೇಳಿದೆ. ಪಾಕ್ ಮಿಲಿಟರಿಯ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಪ್ರಕಾರ ಲಕ್ಕಿ ಮಾರ್ವತ್‌ನಲ್ಲಿ 18 ಭಯೋತ್ಪಾದಕರು, ಕರಕ್ನಲ್ಲಿ 8 ಮಂದಿ ಟೆರರಿಸ್ಟ್‌, ಬಾಗ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ.. ಸೇನಾಪಡೆಯ ದಾಳಿಯಲ್ಲಿ 15ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.. ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಹೇಳಲಾಗಿದೆ.