ಕರ್ನಾಟಕ

ಡ್ರೋನ್ ಪ್ರತಾಪ್ ಗೆ ಮತ್ತಷ್ಟು ಸಂಕಷ್ಟ: ಸಿಎಂ ಕಚೇರಿಯಿಂದ ವರದಿ ನೀಡುವಂತೆ ಸೂಚನೆ

ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಘಟನೆಯ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ತುಮಕೂರು : ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಘಟನೆಯ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಧುಗಿರಿ ಸಿಪಿಐ ಕಚೇರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತೆರಳಿ ಮಾಹಿತಿ ಪಡೆದುಕೊಂಡರು. ಬಳಿಕ, ಅಧಿಕಾರಿಗಳು ಸೋಡಿಯಂ ಸ್ಫೋಟಗೊಂಡ ಜನಕಲೋಟಿ ಬಳಿಯ ಕೃಷಿಹೊಂಡಕ್ಕೆ ತೆರಳಿ ನೀರು ಮತ್ತು ಸ್ಥಳದಲ್ಲಿದ್ದ ಕೆಮಿಕಲ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಿದ್ದಾರೆ.