ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರಿಗಿಂದು ನಿರ್ಣಾಯಕ ದಿನವಾಗಿದೆ. ಮುಡಾ ಪ್ರಕರಣವನ್ನ ಸಿಬಿಐಗೆ ವರ್ಗಾವಣೆ ಮಾಡುವ ಸಂಬಂಧ ಹೈಕೋರ್ಟ್‌ನಿಂದ ಇಂದು ಮಹತ್ವದ ತೀರ್ಪು ಹೊರಬೀಳಲಿದೆ.
ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ಸೈಟ್ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪನ್ನ ಕಾಯ್ರಿದಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ. ಮುಡಾ ಪ್ರಕರಣ ಸಿಬಿಐಗೆ ವರ್ಗಾವಣೆ ಆದರೆ ಸಿಎಂ ಸಿದ್ದರಾಮಯ್ಯ ಪಾಲಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಹಾಗಾಗಿ ನ್ಯಾಯಾಲಯದ ತೀರ್ಪಿನತ್ತ ದೇಶದ ಚಿತ್ತ ನೆಟ್ಟಿದೆ.