ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿ ನ್ಯಾ. ಎಂ.ನಾಗಪ್ರಸನ್ನ ಪೀಠ ಆದೇಶ ತೀರ್ಪು ಪ್ರಕಟಿಸಿದೆ.
ಸಿಬಿಐ ತನಿಖೆಯಿಂದ ಸಿಎಂ ಸಿದ್ದರಾಮಯ್ಯ ಪಾರಾಗಿದ್ದು, ಮುಡಾ ತನಿಖೆ ನಡೆಸಲು ಲೋಕಾಯುಕ್ತ ಸಂಸ್ಥೆ ಸ್ವಾತಂತ್ರ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಆ ಮೂಲಕ ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಲು ಹೈ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಇತ್ತಾ ಹೈಕೋರ್ಟ್ ತೀರ್ಪನ್ನ ಪ್ರಶ್ನಿಸಿ ನಾನು ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.