ಕರ್ನಾಟಕ

ಮುಡಾ ಪ್ರಕರಣ: ಸಿಎಂ ಪತ್ನಿ ಪಾರ್ವತಿ ಗೌಪ್ಯ ಸ್ಥಳದಲ್ಲಿ ವಿಚಾರಣೆ..

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಧಿಕಾರ) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಅವರಿಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಗೌಪ್ಯ ಸ್ಥಳದಲ್ಲಿ ಪಾರ್ವತಿ ಸಿದ್ದರಾಮಯ್ಯರ ವಿಚಾರಣೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಅವರಿಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಗೌಪ್ಯ ಸ್ಥಳದಲ್ಲಿ ಪಾರ್ವತಿ ಸಿದ್ದರಾಮಯ್ಯರ ವಿಚಾರಣೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಗುರುವಾರವಷ್ಟೇ (ಅ.24) ಪಾರ್ವತಿ ಅವರಿಗೆ ಲೋಕಾಯುಕ್ತ ಎಸ್ಪಿ ಉದೇಶ್‌ ನೋಟಿಸ್‌ ಜಾರಿ ಮಾಡಿದ್ದರು. ಶುಕ್ರವಾರ ಮೈಸೂರಿನ ಗೌಪ್ತ ಸ್ಥಳದಲ್ಲಿ ವಿಚಾರಣೆ ನಡೆಸಲಾಗಿದೆ. ಇದು ಚರ್ಚೆಗೂ ಗ್ರಾಸವಾಗಿದೆ.

ಏಕೆಂದರೆ, ತನಿಖಾಧಿಕಾರಿ ಬಿಟ್ಟು ಲೋಕಾಯುಕ್ತ ಕಚೇರಿಯ ಯಾವ ಅಧಿಕಾರಿಗಳಿಗೂ ಪಾರ್ವತಿ ಅವರು ವಿಚಾರಣೆಗೆ ಬರುವ ಮಾಹಿತಿ ತಿಳಿದಿರಲಿಲ್ಲ ಎಂದು ಹೇಳಲಾಗಿದೆ. ಪಾರ್ವತಿ ಅವರ ವಿಚಾರದಲ್ಲಿ ಏಕೆ ಇಷ್ಟು ಗೌಪ್ಯತೆ ಎಂಬ ಪ್ರಶ್ನೆಯೂ ಎದ್ದಿದೆ. ಜೊತೆಗೆ ಪಾರ್ವತಿ ಸಿದ್ದರಾಮಯ್ಯ ಅವರ ವಿಚಾರದಲ್ಲಿ ಗೌಪ್ಯತೆಗೆ ಕಾಯ್ದುಕೊಳ್ಳುವಂತೆ ಲೋಕಾಯುಕ್ತ ಅಧಿಕಾರಿಗೆ ನಿರ್ದೇಶನ ಇತ್ತಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.