ವೈರಲ್

ಲೋಕಾಯುಕ್ತ ಆಯ್ತು ಈಗ ಇಡಿ ಸಂಕಟ !

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಇಬ್ಬರನ್ನ ಇಡಿ ವಿಚಾರಣೆ ಸಾಧ್ಯತೆ ?

ಮೈಸೂರು - ಮುಡಾ ಹಗರಣ ಸಂಬಂಧ ದಿನೇ ದಿನೇ ತನಿಖೆ ಕಾವೇರುತ್ತಿದೆ . ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ಪೊಲೀಸರ ತನಿಖೆಯನ್ನ ಎದುರಿಸಿದ್ದಾರೆ. ಇದರ ಬೆನ್ನಲ್ಲೆ ಜಾರಿ ನಿರ್ದೇಶನಾಲಯವೂ ತನಿಖೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆ ದಟ್ಟವಾಗಿದೆ. ಇದೇ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನ ಸಹ ವಿಚಾರಣೆಗೆ ಹಾಜರಾಗುವಂತೆ3 ನೋಟಿಸ್ ನೀಡುವ ಸಾಧ್ಯತೆಯೂ ದಟ್ಟವಾಗಿದೆ. 

ಈಗಾಗಲೇ ಮುಡಾ ನಿವೇಶನ ಹಂಚಿಕೆ ಸಂಬಂಧ ರಾಜ್ಯದ ಹಲವೆಡೆ ಅಧಿಕಾರಿಗಳ ಮೇಲೆ ಇಡಿ ದಾಳಿ ನಡೆಸಿ ವಿಚಾರಣೆಯನ್ನ ಕೈಗೊಂಡಿದೆ.