ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಶ್ರೀ ಆರ್.ನಾರಾಯಣಸ್ವಾಮಿ, ಮತ್ತವರ ಧರ್ಮಪತ್ನಿ ಅವರನ್ನು ನವದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಿದರು.