ವೈರಲ್

ರೇಣುಕಾ ಸ್ವಾಮಿ ಮನೆಗೆ ಹೊಸ ಅತಿಥಿ ಆಗಮನ..ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಪತ್ನಿ

ದರ್ಶನ್ ಗ್ಯಾಂಗ್ ನಿಂದ ಬೆಂಗಳೂರಿನ ಪಟ್ಟಣಗೆರೆಯ ಶೆಡ್ ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಗೌಡಗೆ ಇನ್ನೂ ಜಾಮೀನು ಭಾಗ್ಯ ಸಿಕ್ಕಿಲ್ಲ. ಈ ನಡುವೆ ಈಗ ರೇಣುಕಾ ಸ್ವಾಮಿ ಪತ್ನಿ ಸಹನಾ ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದುಬಂದಿಂದೆ.

ಚಿತ್ರದುರ್ಗ : ದರ್ಶನ್ ಗೆಳತಿ ಪವಿತ್ರಾಗೆ ಚಿತ್ರದುರ್ಗದ ರೇಣುಕಾಸ್ವಾಮಿಗೆ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದ ಹಿನ್ನೆಲೆ, ದರ್ಶನ್ ಗ್ಯಾಂಗ್ ನಿಂದ  ಬೆಂಗಳೂರಿನ ಪಟ್ಟಣಗೆರೆಯ ಶೆಡ್ ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಗೌಡಗೆ ಇನ್ನೂ ಜಾಮೀನು ಭಾಗ್ಯ ಸಿಕ್ಕಿಲ್ಲ. ಈ ನಡುವೆ ಈಗ ರೇಣುಕಾ ಸ್ವಾಮಿ ಪತ್ನಿ ಸಹನಾ ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದುಬಂದಿಂದೆ.

ರೇಣುಕಾಸ್ವಾಮಿ ಸಾವಿಗೂ ಮುಂಚೆ ಪತ್ನಿ ಸಹನಾಗೆ ಐದು ತಿಂಗಳ ಗರ್ಭಿಣಿಯಾಗಿದ್ದಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿದೆ.